ಮತ್ತೊಮ್ಮೆ ಮೋದಿ ಪಟ್ಟಾಭಿಷೇಕಕ್ಕೆ ಮಹೂರ್ತ ಫಿಕ್ಸ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 23- ಹದಿನೇಳನೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತ ಗಳಿಸಿದ್ದ ನರೇಂದ್ರ ಮೋದಿ ಮೇ 26ರಂದು ಸಂಜೆ ರಾಜಧಾನಿ ದೆಹಲಿಯಲ್ಲಿ ಎರಡನೇ ಬಾರಿ ಪ್ರಧಾನಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅಚ್ಚರಿಯ ಸಂಗತಿ ಎಂದರೆ 2014ರ ಚುನಾವಣೆಯಲ್ಲಿ ಜಯ ಸಾಧಿಸಿದ್ದ ಮೋದಿ ಇದೇ ದಿನ (ಮೇ 26 ) ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ನಾಳೆ ಬಿಜೆಪಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಲಿದೆ.

ಇದಕ್ಕೂ ಮುನ್ನ ಬಿಜೆಪಿ ಸಂಸದೀಯ ಪಕ್ಷದ ನಾಯಕರನ್ನಾಗಿ ಮೋದಿಯವರನ್ನು ಆಯ್ಕೆ ಮಾಡಲಾಗುತ್ತದೆ. ಸರ್ಕಾರ ರಚಿಸಲು ರಾಷ್ಟ್ರಪತಿ ಆಹ್ವಾನ ನೀಡಿದ ನಂತರ ಮುಂದಿನ ಪ್ರಕ್ರಿಯೆ ನಡೆಯಲಿದ್ದು, ಮೇ 26ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ಕೋವಿಂದ್ ಪ್ರಮಾಣ ವಚನ ಬೋಧಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಕೆಲವು ಹಿರಿಯ ಮುಖಂಡರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin