ಮತ್ತೆ ಹಂದಿ ಜ್ವರದ ಭೀತಿ: ಓರ್ವ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಚನ್ನಪಟ್ಟಣ, ಏ.24- ರಾಜ್ಯದಲ್ಲಿ ಮತ್ತೆ ಹಂದಿ ಜ್ವರದ ಭೀತಿ ಕಾಣಿಸಿಕೊಂಡಿದೆ. ಚನ್ನಪಟ್ಟಣದಲ್ಲಿ ಹಂದಿ ಜ್ವರದ ಶಂಕಿತ ರೋಗಿಯೊಬ್ಬ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮಾರಣಾಂತಿಕ ಹಂದಿ ರೋಗಕ್ಕೆ ಬಲಿಯಾದ ವ್ಯಕ್ತಿಯನ್ನು ಚನ್ನಪಟ್ಟಣದ ಯಲಚಿಪಾಳ್ಯದ ನಾಗರಾಜ್ ಎಂಬುವರ ಪುತ್ರ ವೆಂಕಟೇಶ್ (25) ಎಂದು ಗುರುತಿಸಲಾಗಿದೆ.

ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ವೆಂಕಟೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನ ಚಿಕಿತ್ಸೆ ಪಡೆದರೂ ಯಾವುದೇ ಪ್ರಯೋಜನವಾಗದಿದ್ದಾಗ ವೈದ್ಯರ ಸಲಹೆ ಮೇರೆಗೆ ರೋಗಿಯನ್ನು ಬೆಂಗಳೂರಿನ ರಾಜೀವ್‍ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜ್ವರ ಕಡಿಮೆಯಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿದ ರಾಜೀವ್ ಗಾಂಧಿ ಆಸ್ಪತ್ರೆ ವೈದ್ಯರು ವೆಂಕಟೇಶನನ್ನು ವಿವಿಧ ಪರೀಕ್ಷೆಗೆ ಒಳಪಡಿಸಿದಾಗ ಆತನಿಗೆ ಹಂದಿ ರೋಗ ಕಾಣಿಸಿಕೊಂಡಿರುವುದು ಖಚಿತಪಟ್ಟಿತು.

ವೆಂಕಟೇಶನನ್ನು ಉಳಿಸಿಕೊಳ್ಳಲು ಹರಸಾಹಸ ನಡೆಸಿದರಾದರೂ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ನಗರದ ಪಾರ್ವತಿ ಚಿತ್ರಮಂದಿರದ ರಸ್ತೆಯಲ್ಲಿ ಅರ್ಜುನ್ ಟೈಲರಿಂಗ್ ಹಾಲ್ ಅಂಗಡಿ ತೆರೆದು ಹಲವಾರು ವರ್ಷಗಳಿಂದ ಜೀವನ ಮಾಡುತ್ತಿದ್ದ ವೆಂಕಟೇಶ್ ಪ್ರತಿಯೊಬ್ಬರ ಜೊತೆ ವಿಶ್ವಾಸದಿಂದ ಮಾತನಾಡಿಸುವ ಸೌಜನ್ಯದ ವ್ಯಕ್ತಿಯಾಗಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ