ನೂತನ ಶಾಸಕರಾಗಿ ಮುನಿರತ್ನ-ರಾಜೇಶ್‍ಗೌಡ ಪ್ರಮಾಣವಚನ ಸ್ವೀಕರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.23- ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಚುನಾಯಿತರಾಗಿದ್ದ ಮುನಿರತ್ನ ಹಾಗೂ ಡಾ.ಸಿ.ಎಂ.ರಾಜೇಶ್‍ಗೌಡ ಇಂದು ವಿಧಾನಸಭೆಯ ನೂತನ ಸದಸ್ಯರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸಮ್ಮುಖದಲ್ಲಿ ಈ ಇಬ್ಬರು ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ರ್ಪಸಿದ್ದ ಮುನಿರತ್ನ ಅವರು ಜಯಗಳಿಸಿದ್ದು, ಅದೇ ರೀತಿ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ರ್ಪಸಿದ್ದ ರಾಜೇಶ್‍ಗೌಡ ಅವರು ಕೂಡ ಚುನಾಯಿತರಾಗಿದ್ದಾರೆ.

ಇಂದು ಪ್ರಮಾಣ ವಚನ ಸ್ವೀಕರಿಸಿದ ಇಬ್ಬರೂ ಶಾಸಕರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವರು, ಶಾಸಕರು ಹಾಗೂ ಹಲವು ಗಣ್ಯರು ಅಭಿನಂದಿಸಿದರು.

Facebook Comments