ಭಟ್ಕಳ್ ಸಹೋದರರನ್ನು ಭಯೋತ್ಪಾದಕರೆಂದು ಶೋಷಿಸಿದ ಕೇಂದ್ರ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಅ.27- ಹಲವಾರು ಭಯೋತ್ಪಾದನಾ ಕೃತ್ಯಗಳಲ್ಲಿ ಶಾಮೀಲಾಗಿರುವ ಹಿಜ್‍ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಮತ್ತು ಇಂಡಿಯನ್ ಮುಜಾಹಿದೀನ್ ಸಂಘಟನೆಯ ಭಟ್ಕಳ್ ಸಹೋದರರನ್ನು ಕೇಂದ್ರ ಸರ್ಕಾರ ಭಯೋತ್ಪಾದಕರೆಂದು ಘೋಷಿಸಿದೆ.

ಸೈಯದ್ ಸಲಾವುದ್ದೀನ್ ಹಾಗೂ ಇಂಡಿಯನ್ ಮುಜಾಹಿದ್ದೀನ್‍ನ ಸಂಸ್ಥಾಪಕ ಸಹೋದರರಾದ ರಿಯಾಜ್ ಭಟ್ಕಳ್ ಮತ್ತು ಯಾಸಿನ್ ಭಟ್ಕಳ್ ಅವರನ್ನು ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಘೋಷಿಸಿದೆ. ಇವರು ಕಾಶ್ಮೀರ ಸೇರಿದಂತೆ ದೇಶದ ಹಲವೆಡೆಗಳಲ್ಲಿ ಭಯೋತ್ಪಾದನಾ ಕೃತ್ಯಗಳನ್ನು ಎಸಗಿ ಸಾವು ನೋವುಗಳಿಗೆ ಕಾರಣರಾಗಿದ್ದರು.

Facebook Comments