ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುವೆ : ಟಿಬಿಜೆ

ಈ ಸುದ್ದಿಯನ್ನು ಶೇರ್ ಮಾಡಿ

T-B-Jayachandra--01

ತುಮಕೂರು,ಜೂ.16-ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ದುಡಿದಿರುವ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿ ಚಿಕ್ಕವಯಸ್ಸಿನಲ್ಲಿ ಕಾಂಗ್ರೆಸ್ ಪಕ್ಷ ಸೇರಿದೆ. ಕಿರಿಯ ವಯಸ್ಸಿನಲ್ಲೇ ವಿಧಾನಸಭೆ ಪ್ರವೇಶಿಸಿ ಅಂದಿನಿಂದ ಇಂದಿನವರೆಗೂ ನಾನು ಕಾಂಗ್ರೆಸ್ ಪಕ್ಷಕ್ಕೋಸ್ಕರ ದುಡಿದಿದ್ದೇನೆ. ಪಕ್ಷ ಸಂಘಟನೆ ಮಾಡಿದ್ದೇನೆ ಎಂದರು.

ಸಿದ್ದರಾಮಯ್ಯ ಸರ್ಕಾರದ ಐದು ವರ್ಷದ ಅವದಿಯಲ್ಲಿ ಹಲವು ಸಂಕಷ್ಟ ಎದುರಿಸಿದ ಸಂದರ್ಭದಲ್ಲಿ ಸರ್ಕಾರದ ಉಳಿವಿಗೆ ಟೊಂಕ ಕಟ್ಟಿ ನಿಂತಿದ್ದೇನೆ. ಪಕ್ಷ ನನಗೆ ಜವಾಬ್ದಾರಿ ನೀಡಿದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು. ಈ ವಿಷಯವಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರ ಬಳಿ ಚರ್ಚೆ ನಡೆಸಿದ್ದೇನೆ. ಸೂಕ್ತ ಸಂದರ್ಭದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತೇನೆ ಎಂದರು.

ನಮ್ಮ ಪಕ್ಷ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಬೇಷರತ್ ಬೆಂಬಲ ನೀಡಿದೆ. ಅಂದರೆ ಅದರ ಅರ್ಥ ಪೂರ್ಣಾವ„ಗೆ ಎಂದರ್ಥ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಯಾವ ಉದ್ದೇಶವಿಟ್ಟುಕೊಂಡು ಒಂದು ವರ್ಷ ಎಂದು ಹೇಳಿದ್ದಾರೋ ಗೊತ್ತಿಲ್ಲ . ನಮ್ಮ ಮುಖಂಡರು ಅದರ ಬಗ್ಗೆ ಚರ್ಚಿಸುತ್ತಾರೆ.ನಾನು ಜಿಲ್ಲೆ ಮತ್ತು ರಾಜ್ಯದಲ್ಲಿ ಸಕ್ರೀಯವಾಗಿರುತ್ತೇನೆ ಎಂದರು.

Facebook Comments

Sri Raghav

Admin