ತಮಿಳುನಾಡಿನ 22 ಜಿಲ್ಲೆಗಳಲ್ಲಿ ರೆಡ್‍ಅಲರ್ಟ್ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಚನ್ನೈ,ನ.26- ಮತ್ತೆ ತಮಿಳುನಾಡಿನ ಸುಮಾರು 22 ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗುವ ಸೂಚನೆ ನೀಡಿರುವ ಹವಾಮಾನ ಇಲಾಖೆ, ಜನರು ಎಚ್ಚರದಿಂದ ಇರುವಂತೆ ತಿಳಿಸಿದೆ. ಸರ್ಕಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ತಮಿಳುನಾಡಿನ ರಾಜಧಾನಿ ಚನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದಿಂದ ಸುರಿದ ಭಾರೀ ಮಳೆಯಿಂದ ಅಲ್ಲೋಲಕಲ್ಲೋಲ ಸೃಷ್ಟಿಯಾಗಿತ್ತು.

ಈಗ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವುದಿಂದ ಜನರು ಆತಂಕಗೊಂಡಿದ್ದಾರೆ. ತಿರುಣಾವೇಳಿ, ರಾಮನಾಥಪುರಂ, ನಾಗಪತಿನಾರಂ, ತೋಟುಕುಡಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಭಾರತದ ಕೇರಳ, ಪುದುಚೇರಿ ಹಾಗೂ ತಮಿಳುನಾಡಿನ ಕಡಲ ಭಾಗದಲ್ಲಿ ಈಗಾಗಲೇ ಮಳೆ ಶುರುವಾಗಿದ್ದು, ಚನ್ನೈ ಮಹಾನಗರದಲ್ಲಿ ಪ್ರವಾಹದ ಪರಿಸ್ಥಿತಿ ಮತ್ತೆ ಉಲ್ಬಣಿಸಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Facebook Comments