ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ದ.ಕನ್ನಡ,ನ.4- ತಾಂತ್ರಿಕ ದೋಷದಿಂದ ಟ್ಯಾಂಕರ್‌ನ ಗ್ಯಾಸ್ ಸೋರಿಕೆಯಾದ ಹಿನ್ನೆಲೆಯಲ್ಲಿ ರಸ್ತೆಮಧ್ಯೆ ನಿಂತ ಗ್ಯಾಸ್ ಟ್ಯಾಂಕರ್‌ನಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಲಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಸವಾರರು ತೊಂದರೆ ಅನುಭವಿಸುವಂತಾಯಿತು.

ಪುತ್ತೂರು ಬಳಿಯ ಕರವೇಲು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ರಸ್ತೆ ಮಧ್ಯೆ ನಿಂತ ಟ್ಯಾಂಕರ್ ಪರಿಶೀಲಿಸಲು ತಜ್ಞರ ತಂಡ ಸ್ಥಳಕ್ಕೆ ಆಗಮಿಸಿತ್ತು.
ಈ ವೇಳೆ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡು ಈ ಮಾರ್ಗದದಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Facebook Comments