ತನ್ವೀರ್ ಸೇಠ್ ಹಲ್ಲೆ ಪ್ರಕರಣ : ಆರೋಪಿಗಳ ಪತ್ತೆಗೆ ಕೇರಳ, ತಮಿಳುನಾಡಿನಲ್ಲಿ ಸಿಸಿಬಿ ಪೋಲೀಸರ ಶೋಧ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಡಿ.4- ಶಾಸಕ ತನ್ವೀರ್ ಸೇಠ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗೆ ನಗರದ ಪೊಲೀಸ್ ತಂಡ ನೆರೆ ರಾಜ್ಯಗಳಿಗೆ ತೆರಳಿದ್ದಾರೆ. ಸಿಸಿಬಿಯ ಎಸಿಪಿ ಮರಿಯಪ್ಪ ನೇತೃತ್ವದ ಮೂವರು ಇನ್ಸ್‍ಪೆಕ್ಟರುಗಳನ್ನೊಳಗೊಂಡ ತನಿಖಾ ತಂಡದ ಪೊಲೀಸರು ಕೇರಳ, ತಮಿಳುನಾಡು ಹಾಗೂ ಬೆಂಗಳೂರಿಗೆ ತೆರಳಿ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.

ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಫರ್ಹಾನ್ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೆ 15 ಮಂದಿ ಶಂಕಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಡಿಸಿಪಿ ಮುತ್ತುರಾಜ್ ತಿಳಿಸಿದ್ದಾರೆ.

ತನ್ವೀರ್ ಸೇಠ್ ಅವರು ಈಗ ಬೆಂಗಳೂರಿನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿರುವ ತನ್ವೀರ್ ಸೇಠ್ ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Facebook Comments