ಟ್ರ್ಯಾಕ್ಟರ್‌ಗೆ ಟಾಟಾ ಏಸ್ ಡಿಕ್ಕಿ, ಮೂವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಹರಪನಹಳ್ಳಿ,ಫೆ.16- ರಸ್ತೆ ಬದಿ ನಿಂತಿದ್ದ ಟ್ರ್ಯಾಟ್ಕರ್‍ಗೆ ಟಾಟಾಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಹರಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಳಿಯಮ್ಮ (32), ದೊಡ್ಡಹಾಳು ಹನುಮಂತಪ್ಪ (46) ಹಾಗೂ ಲಕ್ಷ್ಮವ್ವ (42) ಮೃತ ದುರ್ದೈವಿಗಳು. ತಾಲ್ಲೂಕಿನ ಅಡವಿಹಳ್ಳಿ ಅಗ್ನಿಶಾಮಕ ಠಾಣೆ ಮುಂಭಾಗ ನಿಂತಿದ್ದ ಟ್ರ್ಯಾಕ್ಟರ್‍ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ.

ಹರಿಹರ ತಾಲ್ಲೂಕಿನ ಹೊಟ್ಟಿಗೆನಹಳ್ಳಿ ಗ್ರಾಮದಿಂದ ಟ್ರ್ಯಾಕ್ಟರ್‍ನಲ್ಲಿ ಕುಟುಂಬ ಸಮೇತ ಕೊಟ್ಟೂರು ಗುರುಬಸವೇಶ್ವರ ದೇವಸ್ಥಾನದಲ್ಲಿ ಕೊಟ್ರೆಶಪ್ಪನವರ ಮೊಮ್ಮಗನ ಜವಳ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯೆ ಶೌಚಾಲಯಕ್ಕೆ ತೆರಳಲು ಎಡಬದಿಗೆ ಟ್ರ್ಯಾಕರ್ ನಿಲ್ಲಿಸಿದ್ದಾರೆ. ಈ ವೇಳೆ ಹರಪನಹಳ್ಳಿಯಿಂದ ಸ್ಟೇಷನರಿ ಸಾಮಾನು ತೆಗೆದುಕೊಂಡು ಹೋಗುತ್ತಿದ್ದ ಟಾಟಾ ಎಸ್ ವಾಹನ ವೇಗವಾಗಿ ಬಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಈ ವೇಳೆ ಹೊಳಿಯಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹನುಮಂತಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ಲಕ್ಷ ್ಮವ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಟಾಟಾಏಸ್ ಚಾಲಕ ತಲೆಮರೆಸಿಕೊಂಡಿದ್ದಾನೆ. ಘಟನೆ ಸಂಬಂಧ ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments