“ತೆರಿಗೆ ವಸೂಲಿ ಮಾಡಿ, ಇಲ್ಲದಿದ್ರೆ ಮನೆಗೆ ಹೋಗಿ” : ಅಧಿಕಾರಿಗಳು ಸಚಿವರ ಖಡಕ್ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಅ.14- ಜಿಲ್ಲಾಯ ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಕುಂಠಿತವಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ನಿಗದಿತ ಗುರಿಯಂತೆ ಕಡ್ಡಾಯವಾಗಿ ಕರ ವಸೂಲಿ ಮಾಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಸಚಿವರು, ನೀರು, ಆಸ್ತಿ, ಜಾಹಿರಾತು ತೆರಿಗೆ ಶುಲ್ಕ ಹಾಗೂ ಅಂಗಡಿ ಮಳಿಗೆಗಳ ಬಾಡಿಗೆಯನ್ನು ರ್ನಿಷ್ಟ ಗುರಿಯಂತೆ ವಸೂಲಿ ಮಾಡಬೇಕು. ಇನ್ನು ಮೂರು ತಿಂಗಳಲ್ಲಿ ಬೇಡಿಕೆಗೆ ಅನುಗುಣವಾಗಿ ತೆರಿಗೆಯನ್ನು ವಸೂಲಿ ಮಾಡದಿದ್ದರೆ ಸಂಬಂಧಿಸಿದ ಅಧಿಕಾರಿಗಳು ಮನೆಗೆ ಹೋಗಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಈ ವೇಳೆ ಸಂಸದ ಎ.ನಾರಾಯಣಸ್ವಾಮಿ ಧ್ವನಿಗೂಡಿಸಿ, ತೆರಿಗೆ ವಸೂಲಾತಿ ವಿಳಂಬ ಧೋರಣೆ ಸರಿಯಲ್ಲ. ಅಧಿಕಾರಿಗಳು ಸಮರ್ಪಕವಾಗಿ ವಸೂಲಿ ಮಾಡಬೇಕು. ತೆರಿಗೆ ಕಟ್ಟದವರಿಗೆ ನೋಟೀಸ್ ನೀಡಬೇಕು. ಆದಾಗ್ಯೂ ತೆರಿಗೆ ಕಟ್ಟದಿದ್ದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಶಿರಾ ತಾಲೂಕು ಒಂದರಲ್ಲೇ 6037 ಅಂತ್ಯಸಂಸ್ಕಾರದ ನೆರವಿನ ಅರ್ಜಿಗಳು ಬಾಕಿ ಉಳಿದಿದ್ದು, ಜಿಲ್ಲಾಯಲ್ಲಿ ಬಾಕಿಯಿರುವ ಎಲ್ಲಾ ಫಲಾನುಭವಿಗಳಿಗೆ ಯೋಜನಾ ಸೌಲಭ್ಯವನ್ನು ಶೀಘ್ರ ತಲುಪಿಸಲು ಕ್ರಮಕೈಗೊಳ್ಳುವಂತೆ ನಿರ್ದೇಶಿಸಿದರು. ಪ್ರತಿ ಕೆಡಿಪಿ ಸಭೆಯಲ್ಲೂ ಬಿಕ್ಕೆಗುಡ್ಡ ನೀರಾವರಿ ವಿಷಯ ಪ್ರಗತಿ ಪರಿಶೀಲನೆಯಾದರೂ ಯೋಜನಾ ಪ್ರಗತಿ ಪೂರ್ಣವಾಗಿಲ್ಲ. ಕೆಲಸಾನೇ ಆಗಿಲ್ಲ ಎಂದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಗೌರವವಿಲ್ಲವೇ ಎಂದು ಪ್ರಶ್ನಿಸಿದರು.

ಸಂಸದ ಎ.ನಾರಾಯಣಸ್ವಾಮಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರೂ ಕೆಲಸವಾಗಲಿಲ್ಲ ಎಂದರೆ ಹೇಗೆ? ಕೆಲಸ ಮಾಡದಿದ್ದರೆ ಮನೆಯಲ್ಲಿರಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ಹೇಮಾವತಿ ನಾಲಾ ವಲಯದ ಪ್ರಗತಿ ಪರಿಶೀಲನೆ ನಡೆಸಿ ಕೈಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.

ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜï, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಸಾಲೆ ಜಯರಾಮ್, ವೀರಭದ್ರಯ್ಯ, ವೆಂಕಟರಮಣಪ್ಪ, ಶಿವಲಿಂಗೇಗೌಡ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಪಂ ಸಿಇಒ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಾಪುರವಾಡ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments