ಶಿರಾ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಕಣಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.16-ಶಿರಾ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಅಭ್ಯರ್ಥಿಯಾಗಬೇಕೆಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಸೂಚಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ತುಮಕೂರು ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಕೆ.ಎನ್.ರಾಜಣ್ಣ ಅವರ ಉಪಾಧ್ಯಕ್ಷತೆಯಲ್ಲಿ ಚುನಾವಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಕೆ.ಎನ್.ರಾಜಣ್ಣ ಅವರು ಜಯಚಂದ್ರ ಅವರ ಅಭ್ಯರ್ಥಿಗಳಾಗಬೇಕೆಂದು ಸಲಹೆ ನೀಡಿದ್ದಾರೆ. ಜಿಲ್ಲೆಯ ಎಲ್ಲಾ ನಾಯಕರು ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಅವರ ಅಭಿಪ್ರಾಯಗಳನ್ನು ಕಾಂಗ್ರೆಸ್ ಹೈಕಮಾಂಡ್‍ಗೆ ರವಾನಿಸಲಿದೆ ಎಂದರು.

ಜಿಲ್ಲೆಯ ಕಾಂಗ್ರೆಸ್ ನಾಯಕರು ಒಟ್ಟಾಗಿ ಚುನಾವಣೆಯನ್ನು ಎದುರಿಸಲಿದ್ದಾರೆ. ತಕ್ಷಣ ಅಧ್ಯಕ್ಷನಾಗಿ ನಾನು, ವಿರೋಧಪಕ್ಷದ ನಾಯಕನಾಗಿ ಸಿದ್ದರಾಮಯ್ಯನವರು ಚುನಾವಣೆಯಲ್ಲಿ ತೊಡಗಿಸಿಕೊಳ್ಳುತ್ತೇವೆ. ಚುನಾವಣೆ ತ್ರಿಕೋನ ಸ್ಪರ್ಧೆಯಾಗಲಿದೆಯೋ ನೇರಾನೇರ ಸ್ಪರ್ಧೆ ಏರ್ಪಡಲಿದೆಯೋ ಗೊತ್ತಿಲ್ಲ.

ಏನೇ ಆದರೂ ಅದನ್ನು ಎದುರಿಸಲು ನಾವು ಎಲ್ಲ ಸಿದ್ದತೆಗಳನ್ನು ಕೈಗೊಂಡಿದ್ದೇವೆ. ಇಂದಿನಿಂದ ಚುನಾವಣೆಯ ಸಿದ್ದತೆಗಳು ಆರಂಭಗೊಳ್ಳಲಿದೆ ಎಂದು ಹೇಳಿದರು.

ಸಭೆಯಲ್ಲಿ ಸಿದ್ದರಾಮಯ್ಯ, ತುಮಕೂರು ಜಿಲ್ಲೆಯ ನಾಯಕರಾದ ಪರಮೇಶ್ವರ್, ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ, ಶಫೀ ಅಹಮ್ಮದ್, ಷಡಕ್ಷರಿ, ಮುದ್ದಹನುಮೇಗೌಡ, ಚಂದ್ರಪ್ಪ ಮುಂತಾದವರಿದ್ದರು.

Facebook Comments