ಪ್ರವಾಸದ ವೇಳೆ ಮರಕ್ಕೆ ಶಾಲಾ ವಾಹನ ಡಿಕ್ಕಿ ಶಿಕ್ಷಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗು, ಡಿ.25- ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿ ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿರುವ ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರಿಕೃಷ್ಣ (45) ಮೃತಪಟ್ಟ ದುರ್ದೈವಿ.

ಶಾಲೆಯಿಂದ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆಂದು ಶಿಕ್ಷಕ ಹರಿಕೃಷ್ಣ ಅವರು ಕರೆದುಕೊಂಡು ಹೋಗಿದ್ದರು. ಪ್ರವಾಸ ಮುಗಿಸಿ ಹಿಂದಿರುಗುವಾಗ ಭದ್ರಾವತಿ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ, ನಿರ್ವಾಹಕ ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments