ಕಾಮುಕ ಶಿಕ್ಷಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಬಾಗಲಕೋಟೆ, ಮೇ 12- ವಿದ್ಯಾರ್ಥಿನಿಯೋರ್ವಳ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ಶಿಕ್ಷಕನ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕಳೆದ ಫೆಬ್ರವರಿ ತಿಂಗಳಲ್ಲಿ ಶಿಕ್ಷಕ, ವಿದ್ಯಾರ್ಥಿನಿ ಜೊತೆ ಶಾಲೆಯ ಕಾರ್ಯಾಲಯದ ಒಳಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಶಾಲೆಯ ಮುಖ್ಯೋಪಾದ್ಯಾಯರು ಶಿಕ್ಷಕನನ್ನು ಎರಡು ತಿಂಗಳ ಹಿಂದೆಯೇ ಅಮಾನತು ಮಾಡಿದ್ದಾರೆ. ಅಲ್ಲದೆ ಶಿಕ್ಷಕನ ವಿರುದ್ಧ ಬಾದಾಮಿ ಫೋಲೀಸ್ ಠಾಣೆಯಲ್ಲಿ ಮೇ 5ರಂದು ಶಿಕ್ಷಕನ  ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸದ್ಯ ಕಾಮುಕ ಶಿಕ್ಷಕನನ್ನು ಫೋಲೀಸರು ಬಂಧಿಸಿದ್ದಾರೆ.

Facebook Comments