ಶಿಕ್ಷಕರ ದಿನಾಚರಣೆ : ಬೋಧಕ ವರ್ಗದ ನಿಸ್ವಾರ್ಥ ಸೇವೆಗೆ ಗಣ್ಯರ ಪ್ರಶಂಸೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಸೆ.5- ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಡಾ. ಎಂ.ವೆಂಕಯ್ಯನಾಯ್ಡು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ದೇಶದ ಶಿಕ್ಷಕ ಸಮುದಾಯದ ಸೇವೆಯನ್ನು ಪ್ರಶಂಸಿಸಿದ್ದಾರೆ.

ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡರು ಮತ್ತು ಡಾ. ಮನಮೋಹನ್ ಸಿಂಗ್, ಕೇಂದ್ರ ಸಚಿವರಾದ ಅಮಿತ್ ಷಾ, ಪ್ರಕಾಶ್ ಜಾವ್ಡೇಕರ್, ಡಿ.ವಿ. ಸದಾನಂದಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗತಿ, ಸ್ಮೃತಿ ಇರಾನಿ, ಡಾ. ಹರ್ಷವರ್ಧನ, ಹಾಗೂ ಕಾಂಗ್ರೆಸ್ ಧುರೀಣರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಾ.ಎಂ.ವೀರಪ್ಪ ಮೊಯ್ಲಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಶಿಕ್ಷಕರ ಸೇವೆಯ ಗುಣಗಾನ ಮಾಡಿದ್ದಾರೆ.

ದೇಶದ ಉಜ್ವಲ ಭವಿಷ್ಯ ರೂಪಿಸುವಲ್ಲಿ ಮತ್ತು ಸುಭದ್ರ ಭಾರತವನ್ನು ನಿರ್ಮಿಸುವಲ್ಲಿ ಶಿಕ್ಷಕ ಸಮುದಾಯದ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದು ಗಣ್ಯರು ಮೆಚ್ಚುಗೆ ಸೂಚಿಸಿದ್ದಾರೆ. ಭಾರತದ ದ್ವಿತೀಯ ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಅಚರಿಸಲಾಗುತ್ತದೆ.

Facebook Comments