ಬ್ರೇಕಿಂಗ್ : ಏ.11ರವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ರಜೆ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.30- ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ನೀಡಲಾಗಿದ್ದ ರಜೆಯನ್ನು ಏಪ್ರಿಲ್‌ 11 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.ಆದರೆ, ರಜೆ ಅವಧಿಯಲ್ಲಿ ಯಾವುದೇ ಶಿಕ್ಷಕರು ಕೇಂದ್ರ ಸ್ಥಾನ ಬಿಡದಂತೆ ಸೂಚನೆ‌ ನೀಡಿದ್ದಾರೆ.

ಕೆಲ ಖಾಸಗಿ ಶಾಲೆಗಳು 2020-21 ನೇ ಸಾಲಿನ ಶುಲ್ಕ ವಸೂಲಾತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭ ಮಾಡಿ‌ ಪೋಷಕರಿಗೆ ಅನಗತ್ಯ ಸಮಸ್ಯೆ ಸೃಷ್ಟಿ ಮಾಡುತ್ತಿರುವುದರ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ 2020-21 ನೇ‌ ಸಾಲಿನ ದಾಖಲಾತಿ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.

ಯಾವುದೇ ಶಾಲೆ ದಾಖಲಾತಿ ಪ್ರಕ್ರಿಯೆಯನ್ನು ನಿರ್ವಹಿಸತಕ್ಕದ್ದಲ್ಲ, ಈಗಾಗಲೇ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೋಷಕರಿಂದ ಶುಲ್ಕ ವಸೂಲಾತಿ ಮಾಡತಕ್ಕದ್ದಲ್ಲ ಎಂಬ ಸ್ಪಷ್ಟ ನಿರ್ದೇಶನ‌ ನೀಡಲಾಗಿದೆ. ಒಂದು ವೇಳೆ ಯಾವುದೇ ಶಾಲೆಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿದಲ್ಲಿ, ಅಂತಹ ಶಾಲಾ ಆಡಳಿತ ಮಂಡಳಿಗಳ ಕಠಿಣ ಕ್ರಮ ಕೈಗೊಳ್ಳಲಾಗುವುದಲ್ಲದೇ, ಸಂಬಂಧಿಸಿದ ಶಾಲೆಗಳ ಮಾನ್ಯತೆ ರದ್ದುಪಡಿಸಲು‌ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದೆಂದು ಸೂಚಿಸಿದರು.

ವಿಪರೀತ ದಂಡ ವಿಧಿಸಲು ಅವಕಾಶವಿದೆ. ಸಾಂಕ್ರಾಮಿಕ ರೋಗಗಳ ಅಧಿನಿಯಮದಡಿಯಲ್ಲಿ ಸಹಾ‌ ತೀವ್ರ ಕ್ರಮಕ್ಕೆ ಮುಂದಾಗಲಾಗುವುದೆಂದು ಸ್ಪಷ್ಟಪಡಿಸಿದ್ದಾರೆ.  ರಾಜ್ಯದಲ್ಲಿ ಇರುವ ಯಾವುದೇ ಪಠ್ಯಕ್ರಮದ‌ ಶಾಲಾ ಆಡಳಿತ ಮಂಡಳಿಗಳು ಪೋಷಕರಿಗೆ ದಾಖಲಾತಿ ಮತ್ತು ಶುಲ್ಕ‌ಪಾವತಿಗೆ ಈಗಾಗಲೇ ಸೂಚನೆ ನೀಡಿದ್ದ ಲ್ಲಿ ಇಂತಹ ಸೂಚನೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಸೂಚಿಸಲಾಗಿದೆ. ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡಬೇಕೆಂದು‌ ಹೇಳಿದರು.

Facebook Comments

Sri Raghav

Admin