ಮಾಲೂರು ತಹಸೀಲ್ದಾರ್ ಅಮಾನತು

ಈ ಸುದ್ದಿಯನ್ನು ಶೇರ್ ಮಾಡಿ

ಮಾಲೂರು, ಡಿ.1- ಕರ್ತವ್ಯಲೋಪ ಮತ್ತು ಕಾನೂನು ಬಾಹಿರವಾಗಿ ಸರ್ಕಾರಿ ಜಮೀನು ಪರಭಾರೆ ಹಿನ್ನೆಲೆಯಲ್ಲಿ ಇಲ್ಲಿನ ತಹಸೀಲ್ದಾರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದ್ದು, ಇದರ ಜತೆಗೆ ಅವರನ್ನು ಅಮಾನತು ಕೂಡ ಮಾಡಲಾಗಿದೆ.

ಮಾಲೂರು ತಾಲ್ಲೂಕು ಲಕ್ಕೂರು ಹೋಬಳಿ ರಾಂಪುರಗ್ರಾಮದಲ್ಲಿ ಎರಡು ಎಕರೆ ಸರ್ಕಾರಿ ಜಮೀನನ್ನು ಕಾನೂನು ನಿಯಮ ಮೀರಿ ಖಾಸಗಿ ವ್ಯಕ್ತಿಯೊಬ್ಬರಿಗೆ ಪರಭಾರೆ ಮಾಡಿದ್ದರು.
ಇತ್ತೀಚೆಗೆ ಪ್ರಾದೇಶಿಕ ಆಯುಕ್ತರಾದ ಹರ್ಷಗುಪ್ತ ಅವರು ಮಾಲೂರಿಗೆ ಭೇಟಿ ನೀಡಿ ಪರಿಶೀಲಿಸಿದಾಗ ತಹಸೀಲ್ದಾರ್ ಮೇಲೆ ದೂರು ಕೇಳಿಬಂದಿತ್ತು. ಇದರ ನಡುವೆ ಕಡತಗಳ ಪರಿಶೀಲನೆ ವೇಳೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿರುವುದು ಕಂಡುಬಂದಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿ ತಹಸೀಲ್ದಾರ್ ನಾಗರಾಜ್ ಅವರನ್ನು ಅಮಾನತು ಮಾಡಿ ಇಲಾಖೆ ವಿಚಾರಣೆಗೆ ಆದೇಶಿಸುವುದರ ಜತೆಗೆ ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗಿದೆ. ಈ ಕುರಿತು ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Facebook Comments