ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಅವಕಾಶ ನೀಡುವಂತೆ ತೇಜಸ್ವಿ ಸೂರ್ಯ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.27- ಸಂಸತ್ತಿನ ಚೊಚ್ಚಲ ಭಾಷಣದಲ್ಲೇ ಅತ್ಯಂತ ವಾಗ್ಮೀಯತೆ ಪ್ರದರ್ಶಿಸಿ ಸದನದ ಗಮನ ಸೆಳೆದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಅವಕಾಶ ನೀಡಬೇಕೆಂದು ಧ್ವನಿ ಎತ್ತಿದ್ದಾರೆ.

ಕರ್ನಾಟಕದ ಯುವಕರಿಗೆ ಗ್ರಾಮೀಣ ಬ್ಯಾಂಕುಗಳಲ್ಲಿ ಉದ್ಯೋಗ ಲಭಿಸಬೇಕು. ಅವರಿಗೆ ಅನ್ಯಾಯವಾಗದಂತಹ ರೀತಿಯಲ್ಲಿ 2014ಕ್ಕೆ ಮುಂಚಿನ ಅಧಿಸೂಚನೆಯಂತೆ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಅವರು ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ.

ಸಾರ್ವಜನಿಕ ಮಹತ್ವಕ್ಕೆ ಸಂಬಂಧಿಸಿದ ವಿಷಯಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ತೇಜಸ್ವಿ ಸೂರ್ಯ, ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿಟ್ಟು, ಕರ್ನಾಟಕದಲ್ಲಿ ಬಿಜೆಪಿಗೆ 25 ಸ್ಥಾನಗಳನ್ನು ನೀಡಲಾಗಿದೆ.

ಇಲ್ಲಿನ ಯುವಕರಿಗೆ ಗ್ರಾಮೀಣ ಬ್ಯಾಂಕ್‍ಗಳಲ್ಲಿ ಉದ್ಯೋಗಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕೆಂದು ಮನವಿ ಮಾಡಿಕೊಂಡರು.2014ರಲ್ಲಿ ಬ್ಯಾಂಕಿಂಗ್ ನೇಮಕಾತಿಗೆ ಸಂಬಂಧಿಸಿದ ಹೊರಡಿಸಿದ ಅಧಿಸೂಚನೆಯಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸರ್ ಸ್ಕೇಲ್ 1 ಹಾಗೂ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಸ್ಥಳೀಯ ಭಾಷೆಯಲ್ಲಿ ಪರಿಣತಿ ಹೊಂದಿರಬೇಕೆಂದು ಕಡ್ಡಾಯ ಮಾಡಲಾಗಿತ್ತು ಎಂದು ತಿಳಿಸಿದರು.

2014ರ ನಂತರ ಈ ಅಧಿಸೂಚನೆಯಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷೆ ಅಗತ್ಯವಿಲ್ಲ. ಪರಿಣತಿ ಪಡೆಯುವ ಅವಧಿಯನ್ನು ಆರು ವರ್ಷಗಳಿಂದ 1 ವರ್ಷಕ್ಕೆ ವಿಸ್ತರಿಸಲಾಗುತ್ತದೆ. ಇದರಿಂದಾಗಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಯುವಕರು ಉದ್ಯೋಗ ಪಡೆಯದಂತಾಗಿದೆ ಎಂದು ವಿವರಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin