Friday, April 19, 2024
Homeರಾಜ್ಯಎಚ್‍ಡಿಕೆ ಭೇಟಿಯಾದ ತೇಜಸ್ವಿ ಸೂರ್ಯ

ಎಚ್‍ಡಿಕೆ ಭೇಟಿಯಾದ ತೇಜಸ್ವಿ ಸೂರ್ಯ

ಬೆಂಗಳೂರು,ಮಾ.25- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಸಂಸದ ತೇಜಸ್ವಿ ಸೂರ್ಯ ಅವರು ಇಂದು ಭೇಟಿಯಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಜೆ.ಪಿ.ನಗರದ ನಿವಾಸದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ ಅವರೊಂದಿಗೆ ಭೇಟಿಯಾದ ತೇಜಸ್ವಿ ಸೂರ್ಯ ಅವರು ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿ, ಶುಭ ಹಾರೈಸಿದರು.

ಬಳಿಕ ಲೋಕಸಭಾ ಚುನಾವಣೆ ಬಗ್ಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮರುಸ್ಪರ್ಧೆ ಮಾಡಲಿದ್ದು, ಜೆಡಿಎಸ್ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕೋರಿದರು.ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ತೇಜಸ್ವಿ ಸೂರ್ಯ ಅವರು ಸೌಹಾರ್ದಯುತವಾಗಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದರು. ಯಾವುದೇ ರಾಜಕೀಯ ವಿಚಾರ ಚರ್ಚೆಯಾಗಲಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.ಭೇಟಿಯ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿದ್ದರು.

RELATED ARTICLES

Latest News