ರೇಪಿಸ್ಟ್‌ಗಳಿಗೆ ಅತ್ಯುಗ್ರ ಶಿಕ್ಷೆ : ತೆಲಂಗಾಣ ಸಿಎಂ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಹೈದರಾಬಾದ್, ಡಿ.2- ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ತ್ವರಿತ ವಿಚಾರಣೆ ಮತ್ತು ಕಠಿಣ ಕ್ರಮಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಆದೇಶಿಸಿದ್ದಾರೆ.

ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣವನ್ನು ಭಯಂಕರ ಮತ್ತು ಅತ್ಯಂತ ನೀಚ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಯಾವುದೇ ಕಾರಣಕ್ಕೂ ಅತ್ಯಾಚಾರಿಗಳು ತಪ್ಪಿಸಿಕೊಳ್ಳದಂತೆ ಅವರಿಗೆ ಕಠಿಣ ಶಿಕ್ಷೆ ವಿಧಿಸುವ ಕಾರ್ಯ ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಪ್ರಕರಣದ ಕುರಿತ ತೀರ್ಪು ಶೀಘ್ರವೇ ಹೊರಬರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಸಭೆ ಬಳಿಕ ಸಿಎಂ ಕೆಸಿಆರ್ ಪ್ರಕರಣವನ್ನು ತ್ವರಿತ ವಿಚಾರಣೆ ನಡೆಸುವಂತೆ ಆದೇಶಿಸಿದ್ದು, ಇದಕ್ಕಾಗಿ ವಿಶೇಷ ತುರ್ತು ಮತ್ತು ತ್ವರಿತ ವಿಚಾರಣಾ ನ್ಯಾಯಪೀಠ ರಚನೆ ಮಾಡಲು ನೀಡಿದ್ದಾರೆ.

ಅಲ್ಲದೆ ಸಂತ್ರಸ್ಥೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿರುವ ಅವರು, ಫೋಷಕರಿಗೆ ತೆಲಂಗಾಣ ಸರ್ಕಾರ ಅಗತ್ಯ ನೆರವು ನೀಡಲು ಸಿದ್ಧವಾಗಿದೆ. ಕಾನೂನಾತ್ಮಕವಾಗಿ ಮಾತ್ರವಲ್ಲದೇ ಕುಟುಂಬಕ್ಕೆ ನೈತಿಕ ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಲಿದೆ. ಕುಟುಂಬಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ನೆರವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.

Facebook Comments