ಉಗ್ರರ ದಾಳಿ : ಪೊಲೀಸ್ ಸಿಬ್ಬಂದಿ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ,ಏ.1- ನಗರದ ನೌಗಮ್ ಪ್ರದೇಶದಲ್ಲಿ ಬಿಜೆಪಿ ಮುಖಂಡರ ನಿವಾಸದ ಮೇಲೆ ಉಗ್ರರು ಗುಂಡು ಹಾರಿಸಿದ್ದು, ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಕುಪ್ವಾರಾ ಜಿಲ್ಲಾಯ ಉಸ್ತುವಾರಿ ವಹಿಸಿಕೊಂಡಿರುವ ಬಿಜೆಪಿ ನಾಯಕ ಅನ್ವರ್ ಅಹಮ್ಮದ್ ಅವರುಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಅದೃಷ್ಟವಶಾತ್ ಅವರು ಸುರಕ್ಷಿತವಾಗಿದ್ದಾರೆ.

ಗುಂಡಿನ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ರಮೀಜಾ ರಾಜಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿರುವ ನೌಗಮ್ ಪ್ರದೇಶಲ್ಲಿ ಘಟನೆ ನಡೆದಿದೆ. ಬಿಜೆಪಿ ಕಾಶ್ಮೀರ ಘಟಕ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

Facebook Comments