ಜಮ್ಮುಕಾಶ್ಮೀರದಲ್ಲಿ ಮೂವರು ಉಗ್ರರ ಎನ್‍ಕೌಂಟರ್

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ,ಜು.17- ಸೇನಾಪಡೆ ನಡೆಸಿದ ಎನ್‍ಕೌಂಟರ್‍ನಲ್ಲಿ ಮೂವರು ಉಗ್ರರು ಹತನಾಗಿದ್ದಾರೆ. ಜಮ್ಮುಕಾಶ್ಮೀರದ ಕುಲ್ಗಾಂ ಜಿಲ್ಲೆಯ ನಾಗ್‍ದಾಡ್ ಪ್ರದೇಶದಲ್ಲಿ ಇಂದು ಮುಂಜಾನೆ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಅಪರಿಚಿತ ಉಗ್ರಗಾಮಿ ಬಲಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ್ದ ಸೇನೆಯ ಮೇಲೆ ಈ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ನಡುವೆ ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಇನ್ನೂ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನಷ್ಟು ಉಗ್ರರು ಈ ಪ್ರದೇಶದಲ್ಲಿ ಅಡಗಿರುವ ಸಾಧ್ಯತೆ ಇದೆ ಎಂದು ಸೇನಾ ಮೂಲಗಳು ತಿಳಿಸಿವೆ.

Facebook Comments

Sri Raghav

Admin