ಕೇಂದ್ರ ಗೃಹ ಮಂತ್ರಿ ಅಮಿತ್ ಶಾಗೆ ಕೊರೊನಾ ಪಾಸಿಟೀವ್..!
ಈ ಸುದ್ದಿಯನ್ನು ಶೇರ್ ಮಾಡಿ
ನವದೆಹಲಿ: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಟೆಸ್ಟ್ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಿದ್ದಾರೆ.
ನನ್ನ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದಾರೆ.
ರಾಜಧಾನಿ ನವದೆಹಲಿಯಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಜೊತೆ ಕೈ ಜೋಡಿಸಿದ್ದ ಅಮಿಶ್ ಷಾ, ತೆಗೆದುಕೊಂಡ ಕೆಲವು ಕಠಿಣ ಕ್ರಮಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.
Facebook Comments