ಮುಂಬೈ ಪೊಲೀಸರ ದಕ್ಷತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ: ಉದ್ಧವ್ ಠಾಕ್ರೆ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಜ.2- ನಮ್ಮ ಮುಂಬೈ ಪೊಲೀಸರ ದಕ್ಷತೆ ಹಾಗೂ ಕೆಲಸವನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಪೊಲೀಸರ ವರ್ಚಸ್ಸನ್ನು ಕುಂದಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿಎಂ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಪೊಲೀಸ್ ಆಯುಕ್ತರಿಂದ ಹಿಡಿದು ಕಾನ್ಸ್‍ಟೆಬಲ್‍ವರೆಗೂ ಎಲ್ಲರೂ ಜನರ ರಕ್ಷಣೆಗಾಗಿ ದುಡಿದಿದ್ದಾರೆ ಎಂದು ಪ್ರಶಂಸಿಸಿದ್ದಾರೆ. ಮುಂಬೈಗೆ ಮಾನಹಾನಿ ಮಾಡಲು ಪ್ರಯತ್ನಿಸಿದವರ ಬಾಯಿ ಮುಚ್ಚಬೇಕು ಎಂದು ಕಿಡಿಕಾರಿದ್ದಾರೆ.

ಹಲವು ಪೊಲೀಸರು ತಮ್ಮ ಜೀವ ಲೆಕ್ಕಿಸದೆ ಕರ್ತವ್ಯದ ವೇಳೆ ಅಸುನೀಗಿದ್ದಾರೆ. ಸಾವಿರಾರು ಮಂದಿ ಕೊರೊನಾ ಸೋಂಕಿನಿಂದ ಬಳಲಿದ್ದಾರೆ. ಅವರ ಕಾರ್ಯವನ್ನು ಯಾರೂ ಪ್ರಶ್ನಿಸಬಾರದು ಎಂದು ಹೇಳಿದರು.

Facebook Comments