ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಈ ಸುದ್ದಿಯನ್ನು ಶೇರ್ ಮಾಡಿ

jds
ತುಮಕೂರು,ಜು.5- ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಹಲ್ಲೆಯಿಂದಾಗಿ ಜೆಡಿಎಸ್ ಕಾರ್ಯಕರ್ತ ಉಮೇಶ್ ಗಂಭೀರವಾಗಿ ಗಾಯಗೊಂಡಿದ್ದು , ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ನಿನ್ನೆ ಮಧ್ಯರಾತ್ರಿ ಉಮೇಶ್ ಬೈಕ್‍ನಲ್ಲಿ ಹೋಗುತ್ತಿದ್ದಾಗ ಯಲ್ಲಾಪುರದ ಬಳಿ ಬಿಜೆಪಿ ಕಾರ್ಯಕರ್ತ ಎನ್ನಲಾದ ಪ್ರದೀಪ್ ಎಂಬಾತ ಬೈಕ್ ತಡೆದು ಮಾರಕಾಸ್ತ್ರಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸ್ಥಳಕ್ಕೆ ವೃತ್ತ ನಿರೀಕ್ಷಕ ಮಧುಸೂದನ್ ಭೇಟಿ ನೀಡಿ ಪರಿಶೀಲಿಸಿದರು. ಸಬ್‍ಇನ್‍ಸ್ಪೆಕ್ಟರ್ ಸೋನಾರ್ ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಪ್ರದೀಪ್‍ನನ್ನು ಬಂಧಿಸಲು ಬಲೆ ಬೀಸಿದ್ದಾರೆ.  ಕಳೆದ ಮೂರು ದಿನಗಳ ಹಿಂದೆ ದುಷ್ಕರ್ಮಿಗಳ ಗುಂಪೊಂದು ಉಮೇಶ್ ಮನೆ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿದ್ದರು. ನಿನ್ನೆ ಉಮೇಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವುದರಿಂದ ಕುಟುಂಬ ವರ್ಗದವರು ತೀವ್ರ ಆತಂಕಕ್ಕೆ ಒಳಗಾಗಿದ್ದು ,ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

Facebook Comments

Sri Raghav

Admin