ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಸಾಂಪ್ರದಾಯಿಕ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

governer

ಬೆಂಗಳೂರು,ಜು.2- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ವಿಧಾನಸಭೆಗೆ ಆಗಮಿಸಿದ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಸಾಂಪ್ರಾದಾಯಿಕವಾಗಿ ಸ್ವಾಗತಿಸಲಾಯಿತು. 12.25ಕ್ಕೆ ಆಗಮಿಸಿದ ರಾಜ್ಯಪಾಲರನ್ನು ಸಭಾಧ್ಯಕ್ಷ ರಮೇಶ್‍ಕುಮಾರ್, ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ, ವಿಧಾನಸಭೆ ಪ್ರತಿಪಕ್ಷದ ನಾಯಕ ಯಡಿಯೂರಪ್ಪ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಉಭಯ ಸದನಗಳ ಸಚಿವಾಲಯದ ಕಾರ್ಯದರ್ಶಿಗಳು ಪುಷ್ಪ ಗುಚ್ಛ ನೀಡಿ ಸ್ವಾಗತಿಸಿದರು. ನಂತರ ರಾಜ್ಯಪಾಲರನ್ನು ಮೆರವಣಿಗೆಯಲ್ಲಿ ಮೂಲಕ ವಿಧಾನಸಭೆಯ ವೇದಿಕೆಗೆ ಕರೆದೊಯ್ಯಲಾಯಿತು.

Facebook Comments

Sri Raghav

Admin