ಬೈಕ್ ಮೇಲೆ ಬೃಹತ್ ಮರ ಬಿದ್ದು ಸವಾರರಿಬ್ಬರು ಸ್ಥಳದಲ್ಲೇ ಸಾವು
ಈ ಸುದ್ದಿಯನ್ನು ಶೇರ್ ಮಾಡಿ
ಕಾರವಾರ, ಜು.14: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಬಿರಗದ್ದೆ ಕ್ರಾಸ್ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಅಂಕೋಲಾ ತಾಲೂಕಿನ ಕನಕನಹಳ್ಳಿ ಗ್ರಾಮದ ಸುಭಾಶ್ ಚಿಪ್ಕರ್ (50) ಹಾಗೂ ನಾಗರಾಜ್ ಸಲಗಾವ್ಕರ್(25) ಮೃತರು ಎಂದು ಗುರುತಿಸಲಾಗಿದೆ.
ಯಲ್ಲಾಪುರದಿಂದ ಅಂಕೋಲಾ ಕಡೆಗೆ ತೆರಳುತಿದ್ದಾಗ ಬೈಕ್ ಮೇಲೆ ಮರ ಬಿದ್ದಿದೆ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಬಿಡದೆ ಗಾಳಿ ಮಳೆಯಾಗುತಿದ್ದು, ಶನಿವಾರವೂ ಮಳೆಗಾಳಿಯ ಆರ್ಭಟ ಜೋರಾಗಿತ್ತು. ಗಾಳಿ ಮಳೆಯಿಂದ ಮರ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Facebook Comments