ನಿವೃತ್ತ ಜಿಲ್ಲಾಧಿಕಾರಿ ಮನೆಯನ್ನೇ ದೋಚಿದ ಖತರ್ನಾಕ್ ಕಳ್ಳರು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.14- ನಿವೃತ್ತ ಜಿಲ್ಲಾಧಿಕಾರಿ ಅವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ನಗದು, ಚಿನ್ನ-ಬೆಳ್ಳಿ ಆಭರಣಗಳನ್ನು ದೋಚಲಾಗಿದೆ.  ಬಸವೇಶ್ವರನಗರದಲ್ಲಿ ವಾಸವಾಗಿರುವ ನಿವೃತ್ತ ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.

ಅವರ ಮನೆಯಲ್ಲಿ ಎರಡು ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದ ನೇಪಾಳಿ ಯುವಕ ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದು, ಆತನೇ ಕಳ್ಳತನ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಸೋಮಶೇಖರ್ ಅವರು ರಾತ್ರಿ ಮನೆಯಲ್ಲಿರಲಿಲ್ಲ.

ಕಾರ್ಯನಿಮಿತ್ತ ಹಾಸನಕ್ಕೆ ಹೋಗಿದ್ದರು. ಇಂದು ಬೆಳಗ್ಗೆ ಮನೆಗೆ ವಾಪಸಾದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಕಂಡುಬಂದಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಎಸ್. ಈ ಸಂಜೆಗೆ ತಿಳಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣ ಮಾಗಡಿ ರಸ್ತೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಮೊಕದ್ದಮೆ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments