ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಕೊರೊನಾ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.2- ಕೊಲೆ ಪ್ರಕರಣವೊಂದರ ಸಂಬಂಧ ವಿಚಾರಣೆಗೆ ಕರೆತಂದಿದ್ದ ಮೂವರು ಆರೋಪಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಅನ್ನಪೂರ್ಣೇಶ್ವರಿನಗರ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸೀಲ್‍ಡೌನ್ ಮಾಡಲಾಗಿದೆ.

ಕೊಲೆ ಪ್ರಕರಣ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ವಿಚಾರಣೆಗಾಗಿ 9 ಮಂದಿ ಆರೋಪಿಗಳನ್ನು ಕರೆತಂದಿದ್ದಾರೆ. ಈ ಆರೋಪಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಅವರಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ.

ಹಾಗಾಗಿ ಅವರ ಸಂಪರ್ಕದಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗುತ್ತದೆ. ಸೋಂಕು ತಗುಲಿರುವ ಆರೋಪಿಗಳು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಅನ್ನಪೂರ್ಣೇಶ್ವರಿನಗರ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸೀಲ್‍ಡೌನ್ ಮಾಡಲಾಗಿದೆ.

Facebook Comments