ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು, ಮಾ.20- ಆಟೋರಿಕ್ಷಾದಲ್ಲಿ ಮಾದಕ ವಸ್ತು ಗಾಂಜಾವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ 700 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೀಣ್ಯ 2ನೆ ಹಂತದ ಅಪ್ಸರ್ (37), ಲಗ್ಗೆರೆಯ ನವೀನ್ (20) ಮತ್ತು ನಂದಿನಿ ಲೇಔಟ್ ನಿವಾಸದಿ ಸೂರ್ಯ (19) ಬಂಧಿತರು.
ನಂದಿನಿ ಲೇಔಟ್ ಠಾಣೆ ಸರಹದ್ದಿನ ಕೂಲಿನಗರ ಬ್ರಿಡ್ಜ್ ಕೆಳಗೆ ಖಾಲಿ ಜಾಗದಲ್ಲಿ ಮಾದಕ ವಸ್ತು ಗಾಂಜಾವನ್ನು ಆಟೋ ರಿಕ್ಷಾದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ ಆಟೋರಿಕ್ಷಾ, ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಲ್ಲೇಶ್ವರಂ ಉಪವಿಭಾಗದ ಎಸಿಪಿ ಧನಂಜಯ ಮಾರ್ಗದರ್ಶನದಲ್ಲಿ ಇನ್‍ಸ್ಪೆಕ್ಟರ್ ಲೋಕೇಶ್ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Facebook Comments