ಸೇನಾ ಎನ್‌ಕೌಂಟರ್‌ಗೆ ಮೂವರು ಜೆಇಎಂ ಉಗ್ರರ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ,ಡಿ.30- ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರಗಾಮಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಇದರೊಂದಿಗೆ ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಗುಂಡಿನ ಕಾಳಗದಲ್ಲಿ ಬಲಿಯಾದ ಉಗ್ರರ ಸಂಖ್ಯೆ 6ಕ್ಕೇರಿದೆ. ಕುಲ್ಗಾಮ್ ಎನ್‍ಕೌಂಟರ್‍ನಲ್ಲಿ ಮೂವರು ಉಗ್ರರು ಹತರಾಗಿದ್ದರು.

ಅನಂತನಾಗ್ ಜಿಲ್ಲೆಯ ನೌಗಾಮ್ ಮತ್ತು ಷಹಾಬಾದ್‍ನಲ್ಲಿ ಉಗ್ರರ ಉಪಸ್ಥಿತಿ ಬಗ್ಗೆ ಬಂದ ಖಚಿತ ವರ್ತಮಾನ ಆಧರಿಸಿ ಭದ್ರತಾ ಪಡೆಗಳು ಬುಧವಾರ ರಾತ್ರಿ ಮುತ್ತಿಗೆ ಮತ್ತು ಶೋಧಕಾರ್ಯಾಚರಣೆಯನ್ನು ಆರಂಭಿಸಿದವು.

ಶೋಧದ ವೇಳೆ ಉಗ್ರರು ಗುಂಡು ಹಾರಿಸಲಾರಂಭಿಸಿದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಮೂವರು ಉಗ್ರರು ಮೃತಪಟ್ಟರು. ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Facebook Comments