ಬೈಕ್‍ಗೆ ಕಾರು ಡಿಕ್ಕಿ : ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ,ಏ.1-ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಹಲ್ದಾರ್‍ಪುರ್ ಪ್ರದೇಶದಲ್ಲಿ ನಡೆದಿದೆ. ಪಹಸಾನ್ ಗ್ರಾಮದ ರಾಜು, ದಿನೇಶ್ ಹಾಗೂ ವಿನೋದ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಮೂವರು ಸ್ನೇಹಿತರಾಗಿದ್ದು ನಿನ್ನೆ ರಾತ್ರಿ ಪಾರ್ಟಿಯಲ್ಲಿ ಪಾಲ್ಗೊಳ್ಳಲು ಬೈಕ್‍ನಲ್ಲಿ ತೆರಳುತ್ತಿದ್ದರು.

ಅಜಮ್‍ಘರ್-ಬಲಿಯಾ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments