ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ; 3 ಸಾವು

ಈ ಸುದ್ದಿಯನ್ನು ಶೇರ್ ಮಾಡಿ

bikeಚಿಕ್ಕೋಡಿ, ಜ.28- ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮದ ಹೊರವಲಯದಲ್ಲಿ ಇಂದು ಸಂಭವಿಸಿದೆ. ವಡ್ರಾಳ ಗ್ರಾಮದ ನಿವಾಸಿಗಳಾದ ಶಂಕರ ಘಾಟಗೆ (35), ಬೀರಪ್ಪ ಖೋತ (52) ಮತ್ತು ಚಿಂಚಣಿ ಗ್ರಾಮದ ನಿವಾಸಿ ಪ್ರವೀಣ ಪಾಟೀಲ ಮೃತ ದುರ್ದೈವಿಗಳಾಗಿದ್ದಾರೆ.

ಬೈಕ್‍ನಲ್ಲಿದ್ದ ಇನ್ನೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಜಾನವ್ವ ಬಬಲೇಶ್ವರ (9) ಮತ್ತು ಲಕ್ಷ್ಮಿ ಬಬಲೇಶ್ವರ (32) ಎಂಬುವವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ