ಕಾಶ್ಮೀರ ಮೂವರು ಉಗ್ರರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಸೆ.19-ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾಪಡೆಗಳು ಮೂವರು ಉಗ್ರಗಾಮಿಗಳನ್ನು ಬಂಧಿಸಿವೆ.

ಬಂಧಿತರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಇವರು ದಕ್ಷಿಣ ಕಾಶ್ಮೀರದವರಾಗಿದ್ದು 19 ರಿಂದ 25 ವರ್ಷಗಳ ವಯೋಮಾನದವರು.

ಈ ಮಧ್ಯೆ, ಕಾಶ್ಮೀರ ಕಣಿವೆ ಯಲ್ಲಿ ಪಾಕಿಸ್ತಾನ ಪ್ರೇರಿತ ಉಗ್ರಗಾಮಿಗಳ ಉಪಟಳ ಹೆಚ್ಚಾಗಿದ್ದು, ಅವರನ್ನು ನಿಗ್ರಹಿಸುವ ಸೇನಾ ಕಾರ್ಯಾ ಚರಣೆಯೂ ಬಿರುಸಾಗಿದೆ.  ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರ ಬಟಮಲೂ ಪ್ರದೇಶದಲ್ಲಿ ಮೊನ್ನೆ ಯೋಧರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.

ಮೃತ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಎನ್‍ಕೌಂಟರ್‍ನಲ್ಲಿ ಸಿಆರ್‍ಪಿಎಫ್‍ನ ಕೆಲವು ಯೋಧರಿಗೆ ಗಾಯಗಳಾಗಿವೆ.

Facebook Comments