ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ಯೋಧ ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಆ.29- ಕಾಶ್ಮೀರ ಕಣಿವೆಯಲ್ಲಿ ಸೇನೆ ನಡೆಸಿದ ದಾಳಿಯಲ್ಲಿ ಮೂವರು ಉಗ್ರರು ಹತರಾಗಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಪುಲ್ವಾಮಾ ಜಿಲ್ಲೆಯ ಗಡಿ ಭಾಗದಲ್ಲಿ ಮೂವರು ಉಗ್ರರು ತಲೆಮರೆಸಿಕೊಂಡಿದ್ದಾರೆ ಎಂಬ ಪೊಲೀಸರ ಮಾಹಿತಿಯನ್ನಾಧರಿಸಿ ತಡ ರಾತ್ರಿ ಶೋಧ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿಗಳ ಗುಂಡಿನ ದಾಳಿಗೆ ಮೂವರು ಉಗ್ರರು ಹತರಾಗಿದ್ದಾರೆ.

ಗುಂಡಿನ ಚಕಮಕಿ ವೇಳೆ ಉಗ್ರರು ನಡೆಸಿದ ಪ್ರತಿ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಸೇನಾ ಮೂಲಗಳು ಖಚಿತಪಡಿಸಿವೆ. ಸೇನಾ ದಾಳಿಗೆ ಬಲಿಯಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.

Facebook Comments

Sri Raghav

Admin