ತಿಮ್ಮಪ್ಪನ ಚಿನ್ನ ಕೊಡಿಸುವುದಾಗಿ ಆಮಿಷವೊಡ್ಡಿ 50 ಲಕ್ಷ ಪಂಗನಾಮ

ಈ ಸುದ್ದಿಯನ್ನು ಶೇರ್ ಮಾಡಿ

Tirupati goldಧಾರವಾಡ,ಜ.12- ತಿರುಪತಿ ತಿಮ್ಮಪ್ಪನ ಚಿನ್ನ ಕೊಡಿಸುವುದಾಗಿ ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬನಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದಿಂದ ಗಡಿಪಾರಾಗಿರುವ ಮೋನ್ಯಾ ಅಲಿಯಾಸ್ ಮೋಹನ್ ವಾಳ್ವೇಕರ್ ಎಂಬಾತನೇ ವಂಚಕನಾಗಿದ್ದಾನೆ.

ಈತ ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ ಅಶ್ವಿನ್ ಪಾಟೀಲ್ ಎಂಬಾತನಿಗೆ ತಿರುಪತಿ ತಿಮ್ಮಪ್ಪನ ಚಿನ್ನ ಕೊಡಿಸುವುದಾಗಿ ನಂಬಿಸಿ 50 ಲಕ್ಷ ರೂ. ಪಡೆದು ಪರಾರಿಯಾಗಿದ್ದಾನೆ. ಮೋನ್ಯಾ ಧಾರವಾಡದಲ್ಲಿ ನಕಲಿ ನೋಟು ಹಾಗೂ ವಂಚನೆ ಪ್ರಕರಣದಲ್ಲಿ ಭಾಗಿಯಾಗಿ ಗಡಿಪಾರಿಗೊಳಗಾಗಿದ್ದ. ಇದೀಗ ಈತನ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದ್ದು ಸ್ಥಳೀಯ ಪೊಲೀಸರು ಆತನ ಪತ್ತೆಗೆ ಶೋಧಕಾರ್ಯ ಚುರುಕುಗೊಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ