Friday, March 29, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-03-2024)

ನಿತ್ಯ ನೀತಿ :
ನಾವು ಮಾಡುವ ಕೆಲಸ, ಗಳಿಸಿದ ಹಣ, ಹೆಸರು ನಮ್ಮ ಆತ್ಮಾಭಿಮಾನಕ್ಕಷ್ಟೇ ಕಾರಣ ಆಗ್ಬೇಕೆ ಹೊರತು ಅಹಂಕಾರಕ್ಕಲ್ಲ.

ಪಂಚಾಂಗ : ಬುಧವಾರ, 13-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ
ತಿಥಿ: ಚತುರ್ಥಿ / ನಕ್ಷತ್ರ: ಅಶ್ವಿನಿ / ಯೋಗ: ಐಂದ್ರ / ಕರಣ: ವಣಿಜ್

ಸೂರ್ಯೋದಯ : ಬೆ.06.28
ಸೂರ್ಯಾಸ್ತ : 06.30
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿಭವಿಷ್ಯ :
ಮೇಷ
: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ.
ಮಿಥುನ: ಖರ್ಚು-ವೆಚ್ಚಗಳನ್ನು ನಿಯಂತ್ರಣದಲ್ಲಿ ಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ.

ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಸಿಂಹ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.

ತುಲಾ: ಪೊಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.

ಮಕರ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.
ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮೀನ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.

RELATED ARTICLES

Latest News