ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಎನ್‍ಕೌಂಟರ್ : ಇಬ್ಬರು ಉಗ್ರರು ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಜು.25-ಕಾಶ್ಮೀರ ಕಣಿವೆಯಲ್ಲಿ ಒಂದೆಡೆ ಪಾಕಿಸ್ತಾನ ಕೃಪಾ ಪೋಷಿತ ಉಗ್ರಗಾಮಿಗಳ ಉಪಟಳ ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ಭಯೋತ್ಪಾದಕರನ್ನು ಸದೆಬಡಿಯುವ ಕಾರ್ಯಾಚರಣೆಯನ್ನೂ ಸೇನಾಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ.

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಇಂದು ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಹತರಾದ ಆತಂಕವಾದಿಗಳ ಬಳಿ ಇದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಶ್ರೀನಗರದ ಹೊರವಲಯದಲ್ಲಿರುವ ರಣಭೀರ್‍ಗಢ್‍ನಲ್ಲಿ ಉಗ್ರರು ಅವಿತಿಟ್ಟುಕೊಂದು ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸುತ್ತಿದ್ದಾರೆ ಎಂಬ ಖಚಿತ ವರ್ತಮಾನದ ಮೇರೆಗೆ ಯೋಧರು ನಿನ್ನೆ ಮಧ್ಯರಾತ್ರಿಯಿಂದಲೇ ಆ ಪ್ರದೇಶವನ್ನು ಸುತ್ತುವರಿದಿದ್ದರು.

ಇಂದು ಮುಂಜಾನೆ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದರು. ಸೇನಾ ಸಿಬ್ಬಂದಿ ಪ್ರತಿಯಾಗಿ ಗುಂಡು ಹಾರಿಸಿದಾಗ ಎನ್‍ಕೌಂಟರ್ ನಡೆಯಿತು.  ಈ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಮೃತ ಭಯೋತ್ಪಾದಕರ ಬಳಿ ಇದ್ದ ಎಕೆ-47 ರೈಫಲ್‍ಗಳು, ಪಿಸ್ತೂಲ್‍ಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Facebook Comments

Sri Raghav

Admin