Wednesday, April 24, 2024
Homeರಾಜ್ಯಬಾಗಲಕೋಟೆ : ಶಾಲಾ ಬಸ್-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ, ನಾಲ್ವರು ವಿದ್ಯಾರ್ಥಿಗಳ ದುರ್ಮರಣ

ಬಾಗಲಕೋಟೆ : ಶಾಲಾ ಬಸ್-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ, ನಾಲ್ವರು ವಿದ್ಯಾರ್ಥಿಗಳ ದುರ್ಮರಣ

ಬಾಗಲಕೋಟೆ,ಜ.29- ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲಾ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಆಲಗೂರ ಬಳಿ ಮಧ್ಯರಾತ್ರಿ ನಡೆದಿದೆ. ಕವಟಗಿ ಗ್ರಾಮದ ಶ್ವೇತಾ ಪಾಟೀಲ (16) , ಸಾಗರ ಕಡಕೋಳ (17), ಗೋವಿಂದ ಜಂಬಗಿ (13), ಬಸವರಾಜ್ ಕೊಟಗಿ (17) ಮೃತಪಟ್ಟ ಶಾಲಾ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಎಂಟಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಜಮಖಂಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ವಿಜಯಪುರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕೆರಗೋಡಿನಲ್ಲಿ ಭಗ್ವದ್‍ಧ್ವಜ ಹಾರಿಸಿದ್ದು ತಪ್ಪು : ಸಿಎಂ ಸಿದ್ದರಾಮಯ್ಯ

ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಹಾವೀರ ಅಲ್ಪಸಂಖ್ಯಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮುಗಿಸಿಕೊಂಡು ಶಾಲಾ ಬಸ್‍ನಲ್ಲಿ ಕವಟಗಿ ಗ್ರಾಮಕ್ಕೆ 12 ಗಂಟೆ ಸುಮಾರಿನಲ್ಲಿ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟ್ರ್ಯಾಕ್ಟರ್ ಶಾಲಾ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ವಿದ್ಯಾರ್ಥಿಗಳು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಬಸ್‍ನಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ಶಾಲಾ ಬಸ್ ಅಪಘಾತಕ್ಕೀಡಾಗಿರುವುದು ದುರದೃಷ್ಟಕರ. ಶಾಲಾ ಬಸ್ ಚಾಲಕ ಹಾಗೂ ಟ್ರ್ಯಾಕ್ಟರ್ ಚಾಲಕನನ್ನು ವಿಚಾರಣೆ ಮಾಡುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಸಂಚಾರಿ ನಿಯಮದ ಬಗ್ಗೆ ಟ್ರ್ಯಾಕ್ಟರ್ ಚಾಲಕರಿಗೂ ಅರಿವು ಮೂಡಿಸಲಾಗುತ್ತಿದೆ. ಆದರೂ ಇಂತಹ ದುರ್ಘಟನೆ ಸಂಭವಿಸುತ್ತಿರುವುದು ದುರದೃಷ್ಟಕರ. ಶಾಲಾ ಬಸ್‍ಗಳಲ್ಲಿ ಹೆಚ್ಚಿನ ಸಂಖ್ಯೆಯ ಬಸ್‍ಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗಬೇಡಿ. ಬೈಕ್ ಸವಾರರು ಸಹ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿ ಎಂದು ಅಮರನಾಥರೆಡ್ಡಿಯವರು ಮನವಿ ಮಾಡಿದರು.

ಆಸ್ಪತ್ರೆಗೆ ಶಾಸಕರ ಭೇಟಿ:
ಅಪಘಾತದ ಸುದ್ದಿ ತಿಳಿದು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಶಾಸಕ ಜಗದೀಶ್ ಗುಡಗುಂಟಿ, ಮಾಜಿ ಶಾಸಕ ಆನಂದ ನ್ಯಾಮಗೌಡ ಭೇಟಿ ನೀಡಿ, ಮೃತ ಮಕ್ಕಳ ಪೋಷಕರಿಗೆ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ, ಕುಟುಂಬಸ್ಥರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

RELATED ARTICLES

Latest News