ಟ್ರಾನ್ಸ್ ಫಾರ್ಮರ್ ದುರಸ್ತಿ ವೇಳೆ ಲೈನ್ಮ್ಯಾನ್ ಸಾವು
ಈ ಸುದ್ದಿಯನ್ನು ಶೇರ್ ಮಾಡಿ
ದೊಡ್ಡಬಳ್ಳಾಪುರ,ಜೂ.3- ಟ್ರಾನ್ಸ್ ಫಾರ್ಮರ್ ದುರಸ್ತಿ ಮಾಡುವ ವೇಳೆ ಸಂಭವಿಸಿದ ಅವಘಡದಲ್ಲಿ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಶಿರವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಘು(27) ಮೃತಪಟ್ಟ ದುರ್ದೈವಿ. ನಿನ್ನೆ ಬೆಳಗ್ಗೆ ಟ್ರಾನ್ಸ್ ಫಾರ್ಮರ್ ದುರಸ್ತಿ ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿ ಈತ ಸಾವನ್ನಪ್ಪಿದ್ದಾನೆ.
ಅವಘಡದ ಬಗ್ಗೆ ರಘು ಸಂಬಂಧಿಕರಿಗೆ ಅಧಿಕಾರಿಗಳು ಮಾಹಿತಿ ನೀಡಿರಲಿಲ್ಲ. ರಘು ಸತ್ತು 5 ಗಂಟೆಗಳ ನಂತರ ವಿಷಯ ತಿಳಿಸಿದ್ದಾರೆ. ಆನಂತರ ಮೃತದೇಹವನ್ನು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಗಿದೆ. ಸಾವಿನ ದಿಕ್ಕು ತಪ್ಪಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ರಘು ಸಂಬಂಧಿಕರು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
Facebook Comments