ಸಾರಿಗೆ ನೌಕರರಿಂದ ಸರ್ಕಾರಕ್ಕೆ ಡೆಡ್ ಲೈನ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.3- ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕಳೆದೆರಡು ದಿನಗಳಿಂದ ವಿಭಿನ್ನ ರೀತಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರು ಇಂದು ವಿವಿಧೆಡೆ ತಮ್ಮ ಕುಟುಂಬ ಸದಸ್ಯರೊಡನೆ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಏ.7ರಂದು ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಮುಂದಾಗಿರುವ ಸಾರಿಗೆ ನೌಕರರು ಏ.1ರಿಂದ ವಿವಿಧ ರೀತಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ನಿನ್ನೆ ಬಸ್ ನಿಲ್ದಾಣ, ನಗರದ ವೃತ್ತಗಳಲ್ಲಿ ಕಾಫಿ, ಟೀ, ಬೋಂಡ, ಬಜ್ಜಿ ಮಾರಾಟ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದರು. ಇಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಮಾನವ ಸರಪಳಿ ರಚಿಸಿ ಹಲವೆಡೆ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ನಾಳೆ ಬೇಡಿಕೆಗಳಿರುವ ಕರಪತ್ರ ಹಂಚುವುದು, 5ರಂದು ಧರಣಿ ಸತ್ಯಾಗ್ರಹ, 6ರಂದು ಉಪವಾಸ ಸತ್ಯಾಗ್ರಹ, 7ರಂದು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಈ ನಡುವೆ ಸರ್ಕಾರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿರುವ ಅವರು ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.

Facebook Comments