ವಿವಾದಿತ ಹೊಸ ಶಿಕ್ಷಣ ನೀತಿ ಕೈಬಿಡಲು ಟ್ರಂಪ್ ಸಮ್ಮತಿ

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್,ಜು.15-ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಮಾರಕವಾಗಲಿದ್ದ ಹೊಸ ಶಿಕ್ಷಣ ನೀತಿಯನ್ನು ಕೈಬಿಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮ್ಮತಿಸಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಓದಿಗೆ ಮಾರಕವಾಗುವಂತಹ ಹೊಸ ಶಿಕ್ಷಣ ನೀತಿಯನ್ನು ಇತ್ತೀಚೆಗೆ ಅಮೆರಿಕ ಕೈಗೊಂಡಿತ್ತು.

ಟ್ರಂಪ್ ಆಡಳಿತದ ಈ ನೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಯೂಟರ್ನ್ ಮಾಡಿರುವ ಟ್ರಂಪ್ ಅವರು ಹೊಸ ನೀತಿಯನ್ನು ಕೈಬಿಡುವುದಾಗಿ ಘೋಷಿಸಿದ್ದಾರೆ.

ಅಮೆರಿಕದ 17 ರಾಜ್ಯಗಳು, ಪ್ರತಿಷ್ಠಿತ ಐಟಿ ಕಂಪನಿಗಳಾದ ಗೂಗಲ್, ಫೇಸ್‍ಬುಕ್, ಮೈಕ್ರೋಸಾಫ್ಟ್ ಮತ್ತಿತರ ಸಂಸ್ಥೆಗಳು ಹೊಸ ಶಿಕ್ಷಣ ನೀತಿಯನ್ನು ಖಂಡಿಸಿ ದೇಶಕ್ಕೆ ಬಿಲಿಯನ್ ಗಟ್ಟಲೆ ಆದಾಯ ತಂದುಕೊಡುತ್ತಿರುವ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಕಡಿವಾಣ ಹಾಕುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದರು.

ಅಮೆರಿಕದ ಈ ನಿರ್ಧಾರದಿಂದ ಆ ದೇಶದಲ್ಲಿ ಉನ್ನತ ವ್ಯಾಸಂಗ ಪಡೆಯುತ್ತಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

2018, 19ನೇ ಸಾಲಿನಲ್ಲಿ ಅಮೆರಿಕದಲ್ಲಿ 10 ಲಕ್ಷಕ್ಕೂ ಹೆಚ್ಚು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಸುಮಾರು ಎರಡು ಲಕ್ಷದಷ್ಟು ಭಾರತೀಯ ವಿದ್ಯಾರ್ಥಿಗಳು ಸೇರಿದ್ದರು.

Facebook Comments

Sri Raghav

Admin