ಫಲಿತಾಂಶಕ್ಕೂ ಹೊರಬೀಳುವುದಕ್ಕೂ ಮುನ್ನವೇ ತುಮಕೂರಲ್ಲಿ ಬಿಜೆಪಿ ಸಂಭ್ರಮಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಮೇ 23-ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ  ಜಿ.ಎಸ್.ಬಸವರಾಜುಗೆ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಹೆಚ್ಚು ಮತಗಳು ಬಂದಿದ್ದು, ಬಿಜೆಪಿ ಕಾರ್ಯಕರ್ತರು ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಜೈಕಾರ ಕೂಗಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಮುನ್ನವೇ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಳ ಅಂತರವನ್ನು ಲೆಕ್ಕ ಹಾಕಲಾಯಿತು. ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಬಿಜೆಪಿಗೆ ಸುಮಾರು 10 ಸಾವಿರ ಲೀಡ್ ಸಿಕ್ಕಿದ್ದು ಅಚ್ಚರಿಗೆ ಕಾರಣವಾಗಿತ್ತು.

ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅವರಿಗೆ ಟಿಕೆಟ್ ತಪ್ಪಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದಾಗಲೇ ತುಮಕೂರಿನಲ್ಲಿ ಬಂಡಾಯ ಎದುರಾಗಿತ್ತು. ಕೆ.ಎನ್.ರಾಜಣ್ಣ ಮತ್ತು ಸಂಸದರಾಗಿದ್ದ ಎಸ್.ಪಿ.ಮುದ್ದಹನುಮೇಗೌಡ ಇಬ್ಬರೂ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದರು.

ಆಗೂ ಹೀಗೂ ಇಬ್ಬರನ್ನೂ ಸಮಾಧಾನಪಡಿಸಿ ನಾಮಪತ್ರ ವಾಪಸ್ ತೆಗೆಸಲಾಯಿತಾದರೂ ಚುನಾವಣೆಯಲ್ಲಿ ಕೆಲಸ ಮಾಡುವಂತೆ ಮನವೊಲಿಸುವಲ್ಲಿ ದೋಸ್ತಿ ನಾಯಕರು ವಿಫಲರಾದರು. ಅದರ ಪರಿಣಾಮ ದೇವೇಗೌಡರಿಗೆ ಹಿನ್ನಡೆಯಾಗಿದೆ. [ LOKSABHA ELECTIONS 2019 RESULT – Live Updates]

ಬಿಜೆಪಿಯ ಕಾರ್ಯಕರ್ತರು ಕೆ.ಎನ್.ರಾಜಣ್ಣ ಅವರಿಗೆ ಜಯಘೋಷಣೆಗಳನ್ನು ಕೂಗುತ್ತಾ ಸಂಭ್ರಮಾಚರಣೆ ಮಾಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin