ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Lorry-Accident--01

ಶಿರಾ, ಜೂ.5- ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರವ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾ ತಾಲ್ಲೂಕಿನ ಕೆಂಚಪ್ಪನಹಳ್ಳಿ ನಿವಾಸಿಗಳಾದ ಶರತ್ (30), ಆನಂದ (30) ಮೃತಪಟ್ಟ ದುರ್ದೈವಿಗಳು.
ರಾತ್ರಿ 9 ಗಂಟೆ ಸುಮಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 48ರ ಚಿಕ್ಕನಹಳ್ಳಿ ಬಳಿ ಪ್ಯಾಸ್ಟಿಕ್ ಲೋಡ್ ತುಂಬಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಸರ್ವೆ ಮರಗಳನ್ನು ತುಂಬಿಕೊಂಡು ತೆರಳುತ್ತಿದ್ದ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಕುಮಾರ ಮತ್ತು ಪಾಪಣ್ಣ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಶಿರಾ ಹಾಗೂ ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ಲಾರಿಗಳು ಒಂದಕ್ಕೊಂದು ಕಚ್ಚಿಕೊಂಡಿದ್ದು, ಶವಗಳನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಸುದ್ದಿ ತಿಳಿದು ಕಳ್ಳಂಬೆಳ್ಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ರಸ್ತೆಯಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಇತ್ತೀಚೆಗಷ್ಟೆ ಖಾಸಗಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಎಂಟು ಮಂದಿ ಮೃತಪಟ್ಟಿದ್ದರು. ಅದು ಮಾಸುವ ಮುನ್ನವೇ ಈ ಘಟನೆ ನಡೆದಿದೆ. ಇನ್ನು ರಾತ್ರಿಯ ವೇಳೆ ಹೆದ್ದಾರಿಯಲ್ಲಿ ಸಂಚರಿಸುವುದು ಸೂಕ್ತವಲ್ಲ ಎನ್ನುತ್ತಾರೆ ಸ್ಥಳಿಯರು.

Facebook Comments

Sri Raghav

Admin