ಆಕಸ್ಮಿಕವಾಗಿ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಜೂ. 16-ಶೆಡ್ ನಿರ್ಮಾಣದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಾಂತಿನಗರ ಜಾಕೀರ್ ಅಹಮ್ಮದ್(28) ಮೃತ ಪಟ್ಟ ದುರ್ದೈವಿ.

ಹುದ್ದೆಹೊಸಕೆರೆ ಬಳಿ ಇರುವ ವಸಂತಕುಮಾರ್ ಎಂಬುವರ ಜಮೀನಿನಲ್ಲಿರುವ ಕೋಳಿ ಫಾರಂ ಶೆಡ್ ನಿರ್ಮಾಣ ಮಾಡಲು ಜಾಕೀರ್ ಅಹಮ್ಮದ್ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದೆ. ಕೂಡಲೇ ಅವರನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರು.ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಶೆಡ್ ನಿರ್ಮಾಣದ ವೇಳೆ ಯಾವುದೇ ಮುಂಜಾಗೃಕತೆ ಕೈಗೊಳ್ಳದೇ ಇರುವುದರಿಂದ ಅನಾಹುತ ಸಂಭವಿಸಿದೆ ಎಂದು ಆರೋಪಿಸಿ ಪತ್ನಿ ಚೇಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಸಬ್ ಇನ್ಸ್‍ಪೆಕ್ಟರ್ ಲಕ್ಷ್ಮೀಕಾಂತ್ ಕ್ರಮ ಕೈಗೊಂಡಿದ್ದು, ಸ್ಥಳಕ್ಕೆ ವೃತ್ತ ನಿರೀಕ್ಷಿಕ ದೀಪಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ