ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮಾಡಿದ ಆರೋಪಿಯ ಗಡಿಪಾರಿಗೆ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಕುಣಿಗಲ್, ಜೂ.18-ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮಾಡಿದ ಆರೋಪಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ತಾಲೂಕಿನ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು.

ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಈ ಘಟನೆಯನ್ನು ವಿರೋಧಿಸಿ ತಾಲೂಕಿನ ನಾನಾ ಹಳ್ಳಿಗಳಿಂದ ಆಗಮಿಸಿದ ದಲಿತ ಮುಖಂಡರು, ಪ್ರವಾಸಿ ಮಂದಿರದಿಂದ ಮೆರವಣಿಗೆ ಮುಖಾಂತರ ತಾಲೂಕು ಕಚೇರಿಯವರೆಗೂ ಸಾಗಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಗಡಿಪಾಡು ಮಾಡಿ ನ್ಯಾಯ ದೊರಕಿಸಿಕೊಡುವಂತೆ ತಹಸೀಲ್ದಾರ್ ಕಚೇರಿ ಬಳಿ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರ್ ವಿಶ್ವನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ವಿ.ಶಿವಶಂಕರ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ದಿನನಿತ್ಯ ದಲಿತರ ಮೇಲೆ ಮತ್ತು ಹಿಂದುಳಿದವರ ಮೇಲೆ ಸಮಾಜದ ಬಲಾಢ್ಯ ವರ್ಗಗಳಿಂದ ದೌರ್ಜನ್ಯ ನಡೆಯುತ್ತಿದ್ದು, ಸ್ವಾತಂತ್ರ್ಯ ಭಾರತದಲ್ಲಿ ದೀನರು, ದಲಿತರು, ದುರ್ಬಲರು ನೆಮ್ಮದಿಯಾಗಿ ಬದುಕುವುದು ಕಷ್ಟವಾಗಿದೆ.

ಇದಕ್ಕೆ ಪರೋಕ್ಷವಾಗಿ ಕೆಲವು ಇಲಾಖೆಗಳ ಸಹಕಾರವೂ ಇದೆ. ಇದರಂತೆಯೇ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿರುವ ದಲಿತ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದ್ದು,ಇಂತಹ ಹೀನಕೃತ್ಯವನ್ನು ಪ್ರಜ್ಞಾವಂತರು, ವಿದ್ಯಾವಂತರು ಖಂಡಿಸಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ತಾಲೂಕು ಪಂಚಾಯ್ತಿಯ ಮಾಜಿ ಅಧ್ಯಕ್ಷ ಎಸ್.ಆರ್.ಚಿಕ್ಕಣ್ಣ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ವರದರಾಜು, ಮುಖಂಡರಾದ ದಲಿತ ನಾರಾಯಣ, ನರಸಿಂಹಮೂರ್ತಿ, ರಾಜು, ವೆಂಕಟಪ್ಪ, ನಾಗಣ್ಣ, ಕೃಷ್ಣಮೂರ್ತಿ, ರಾಮಲಿಂಗಯ್ಯ ಮತ್ತಿತರರು ಪಾಲ್ಗೊಂಡಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ