ಸೆರೆ ಸಿಕ್ಕ ಚಿರತೆ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಸೆ.24- ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುರುಗನಹಳ್ಳಿ ಗ್ರಾಮದ ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ.ಹಲವು ದಿನಗಳಿಂದ ಗ್ರಾಮದ ಸುತ್ತಮುತ್ತ ಕುರಿ, ಮೇಕೆಗಳ ಮೇಲೆ ಚಿರತೆ ದಾಳಿ ಮಾಡುತ್ತಿದ್ದು , ಇದರಿಂದ ರೈತರು ತೀವ್ರ ಕಂಗಾಲಾಗಿದ್ದರು.

ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದು ಈ ಹಿನ್ನೆಲೆಯಲ್ಲಿ ಗ್ರಾಮದ ಸಮೀಪ ಅರಣ್ಯ ಇಲಾಖೆಯವರು ಬೋನನ್ನು ಇಟ್ಟಿದ್ದರು. ಆಹಾರವನ್ನು ಅರಸಿ ಬಂದ ಚಿರತೆ ಬೋನಿನಲ್ಲಿ ಸೆರೆ ಸಿಕ್ಕಿದ್ದು ಬುದ್ಧಿ ತಿಳಿದ ಕೂಡಲೇ ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಸ್ಥಳಾಂತರಿಸಿದ್ದಾರೆ.

Facebook Comments