ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ : ಪತಿ ಸಾವು, ಪತ್ನಿ ಮತ್ತು ಮಗು ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಫೆ.13- ರಸ್ತೆಬದಿ ಯಾವುದೇ ಸಿಗ್ನಲ್ ಲೈಟ್ ಹಾಕದೆ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪತಿ ಮೃತಪಟ್ಟು ಪತ್ನಿ ಮತ್ತು ಮಗು ಗಂಭೀರ ಗಾಯಗೊಂಡಿರುವ ಘಟನೆ ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ತಾಲ್ಲೂಕಿನ ಸೋರೆಕುಂಟೆ ಬಳಿಯ ಲಿಂಗದಹಳ್ಳಿ ಗ್ರಾಮದ ನಿವಾಸಿ ಲೋಕೇಶ್(32) ಮೃತಪಟ್ಟ ವ್ಯಕ್ತಿ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಪವಿತ್ರಾ(30) ಮತ್ತು ಮಗು ಚೇತನ್(5) ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂಲತಃ ಕುಣಿಗಲ್ ನಿವಾಸಿಯಾದ ಲೋಕೇಶ್ ಅವರು ರೈಲ್ವೆ ಇಲಾಖೆಯಲ್ಲಿ ನೌಕರರಾಗಿದ್ದು, ಪತ್ನಿ, ಮಗುವಿನೊಂದಿಗೆ ಸಿಬಿ ನರಸಿಂಹಸ್ವಾಮಿ ಜಾತ್ರೆಗೆಂದು ನಿನ್ನೆ ಹೋಗಿದ್ದರು. ರಾತ್ರಿ ಅಲ್ಲಿಯೇ ತಂಗಿದ್ದು ಇಂದು ಬೆಳಗಿನ ಜಾವ 4 ಗಂಟೆಯಲ್ಲಿ ವಾಪಸ್ಸಾಗುತ್ತಿದ್ದರು.

ತುಮಕೂರು-ಕುಣಿಗಲ್ ಮಾರ್ಗದ ರಸ್ತೆಯಲ್ಲಿ ಬಾಣಾವರ ಗೇಟ್ ಬಳಿ 5.30ರ ಸುಮಾರಿನಲ್ಲಿ ಲಾರಿ ಚಾಲಕ ಲಾರಿಯನ್ನು ರಸ್ತೆಬದಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದಾರೆ.
ಈ ವೇಳೆ ಯಾವುದೇ ಸಿಗ್ನಲ್ ಲೈಟ್ ಲಾರಿಗೆ ಹಾಕದಿದ್ದರಿಂದ ಲಾರಿ ನಿಂತಿರುವುದು ಲೋಕೇಶ್ ಅವರ ಗಮನಕ್ಕೆ ಬಾರದೆ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ಲೋಕೇಶ್ ಎದೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಪತ್ನಿ ಹಾಗೂ ಮಗು ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸುದ್ದಿ ತಿಳಿದು ಹೆಬ್ಬೂರು ಠಾಣೆ ಇನ್‍ಸ್ಪೆಕ್ಟರ್ ಸುಂದರ್ ಅವರು ಪ್ರಕರಣ ದಾಖಲಾಇಸಿಕೊಂಡಿದ್ದಾರೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ಶ್ರೀಧರ್ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Facebook Comments