ರೈಲ್ವೆ ನಿಲ್ದಾಣದಲ್ಲಿ ಬೇಕಾಬಿಟ್ಟಿ ಸ್ಕ್ಯಾನಿಂಗ್‍ ಮಾಡಿದ ಆರೋಗ್ಯ ಸಿಬ್ಬಂದಿ ಸಸ್ಪೆಂಡ್

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಮಾ.21- ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಹಾಯಕ ನರಸಿಂಹಮೂರ್ತಿ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ಮಾಡುವಾಗ ಬೇಕಾಬಿಟ್ಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸನ್ನಿವೇಶವನ್ನು ಮೊಬೈಲ್‍ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿತ್ತು.

ಇದರಿಂದ ಗ್ರಾಮದಲ್ಲಿ ತಕ್ಷಣವೇ ಎಚ್ಚೆತ್ತ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಚಂದ್ರಕಲಾ ಅವರು ಆರೋಗ್ಯ ಅಧಿಕಾರಿಯನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ನಗರದಲ್ಲಿ ರೈಲ್ವೆ ಥರ್ಮಲ್ ಸ್ಕ್ಯಾನಿಂಗ್ ಮಾಡಲು ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ನರಸಿಂಹಮೂರ್ತಿ ಎಂಬುವವರನ್ನು ನೇಮಕಾತಿ ಮಾಡಿದ್ದರೂ ಇಡೀ ರಾಷ್ಟ್ರಾದ್ಯಂತ ಕೊರೊನಾ ರೋಗದ ಹಿನ್ನೆಲೆಯಲ್ಲಿ ಪರಿಸ್ಥತಿಯನ್ನು ಗಂಭೀರವಾಗಿ ಪರಿಗಣಿಸಿ ದಿನದ 24 ಗಂಟೆಯೂ ಶ್ರಮಿಸುತ್ತಿದ್ದಾರೆ.

ಆದರೆ ತುಮಕೂರು ರೈಲ್ವೆ ನಿಲ್ದಾಣದಲ್ಲಿ ಬೇಕಾಬಿಟ್ಟಿ ತಪಾಸಣೆ ಮಾಡುತ್ತಿದ್ದ ನರಸಿಂಹ ಮೂರ್ತಿ ಮೊಬೈಲ್‍ನಲ್ಲಿ ಮಾತನಾಡುತ್ತ ಕಾಟಾಚಾರಕ್ಕೆ ತಪಾಸಣೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬೇಜವಾಬ್ದಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ಆಧಾರದ ಮೇಲೆ ಡಿಎಚ್‍ಒ ಅಮಾನತುಗೊಳಿಸಿ ಆದೇಶಿಸಿದ್ದಾರೆ.

Facebook Comments