ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ನಾಳೆ ತುಮಕೂರು ಬಂದ್..!

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಅ.21- ಬಜರಂಗದಳ ಕಾರ್ಯಕರ್ತರ ಮೇಲೆ ಅನ್ಯ ಕೋಮಿನವರು ಹಲ್ಲೇ ಮಾಡಿರುವುದನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ನಾಳೆ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆಸಲಾಗಿದೆ ಎಂದು ಎಸ್ಪಿ ರಾಹುಲ್ ಕುರ್ಮಾ ಶಹಾಪೂರವಾಡ್ ತಿಳಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಸೇರಿದಂತೆ ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ತುಮಕೂರು ಬಂದ್ ಗೆ ಕರೆ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಚ.ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಹಿಂದೂಗಳ ಮೇಲೆ ಪದೇ ಪದೇ ಹಲ್ಲೆ ನಡೆಯುತ್ತಿದೆ. ನಗರದಲ್ಲಿ ಕಸಾಯಿ ಖಾನೆಗಳು ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಹಿಂದೂ ಪರ ಸಂಘಟನೆಗಳು ಬಂದ್ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ.

ವಾಲ್ಮೀಕಿ ಜಯಂತಿ ಮುಗಿದ ನಂತರ ಆರ್‍ಎಸ್‍ಎಸ್‍ನ ಸಾಧನಾ ಕಚೇರಿ ಸೇರಿದ ಶಾಸಕ ಜ್ಯೋತಿ ಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮೇಯರ್ ಬಿ.ಜಿ.ಕೃಷ್ಣಪ್ಪ ಅವರೊಂದಿಗೆ ಹಿಂದೂ ಪರ ಸಂಘಟನೆಗಳವರು ಸುದೀರ್ಘ ಚರ್ಚೆಯ ಬಳಿಕ ಹಿಂದೂಗಳ ಶಕ್ತಿ ಪ್ರದರ್ಶನಕ್ಕೆ ಬಂದ್ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಐವರ ಬಂಧನ: ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಕಿರಣ್ ಮೇಲೆ ಹಲ್ಲೇ ಮಾಡಿದ ಐವರು ಆರೋಪಿಗಳನ್ನು ಪೆÇಲೀಸರು ಬುಧವಾರ ಬಂಸಿದ್ದಾರೆ. ಆರೋಪಿಗಳ ಬಂಧನಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಾಪೂರವಾಡ್ ಅವರು ಎರಡು ತಂಡಗಳನ್ನು ರಚಿಸಿದ್ದು, ಬಂತ ಐವರ ಹೆಸರನ್ನು ಬಹಿರಂಗಪಡಿಸಿಲ್ಲ. ಉಳಿದವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರೆದಿದೆ.

ವ್ಹೀಲಿಂಗ್ ನಿಯಂತ್ರಣಕ್ಕೆ ಕ್ರಮ: ನಗರದಲ್ಲಿ ಬೈಕ್ ವ್ಹೀಲಿಂಗ್ ನಿಯಂತ್ರಿಸಲು ಜಿಲ್ಲಾ ಪೊಲೀಸರು ಮುಂದಾಗಿದ್ದಾರೆ, ಗುಬ್ಬಿ ಗೇಟ್ ಸೇರಿದಂತೆ ಪ್ರಮುಖ ರಸ್ತೆಗಳಿಗೆ ಗಸ್ತು ಹಾಕಲು ತೀರ್ಮಾನ ಕೈಗೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ರಾಹುಲ್ ಕುಮಾರ ಶಹಾಪೂರವಾಡ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಗೆ ರಾಜೇಶ್ ಗೌಡ ಭೇಟಿ: ಹಲ್ಲೇಯಲ್ಲಿ ಗಾಯಗೊಂಡಿರುವ ಮಂಜುಭಾರ್ಗವ್ ಅವರನ್ನು ಸಿರಾ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯಾಕಾರಿಗಳಿಗೆ ಸೂಚನೆ ನೀಡಿದರು.

Facebook Comments