ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಈ ಸುದ್ದಿಯನ್ನು ಶೇರ್ ಮಾಡಿ

mತುಮಕೂರು,ನ.4- ಶಾಲಾ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೊ ಕಾಯ್ದಯಡಿ ಪ್ರಕರಣ ದಾಖಲಾಗಿದೆ. ಶಿರಾ ತಾಲ್ಲೂಕಿನ ಬಂದಕುಂಟೆ ಗ್ರಾಮದ ಸರ್ಕಾರಿ ಅನುದಾನಿತ ಶ್ರೀ ಮಣ್ಣಮ್ಮ ಪ್ರೌಢಶಾಲೆಯ ಕನ್ನಡ ಶಿಕ್ಷಕ ದಾದಾಪೀರ್ ಆರೋಪಿಯಾಗಿದ್ದು, ತಲೆ ಮರೆಸಿಕೊಂಡಿದ್ದಾನೆ.ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ವಿದ್ಯಾರ್ಥಿನಿ ಕಳೆದ 15ದಿನಗಳಿಂದ ಶಾಲೆಗೆ ಹೋಗಿರಲಿಲ್ಲ. ಇದರಿಂದ ಅನುಮಾನಗೊಂಡ ಪೋಷಕರು ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ವಿಷಯ ತಿಳಿಯುತ್ತಿದ್ದಂತೆ ಪೋಷಕರು ಮತ್ತು ಸ್ಥಳೀಯರು ಶಾಲೆಗೆ ತೆರಳಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯ್‍ಕುಮಾರ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಠಾಣೆಯಲ್ಲಿ ಪೋಕ್ಸೊ ಕಾಯ್ದೆ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಶಿಕ್ಷಕನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

Facebook Comments